ಮಡಿಕೇರಿ, ನ. 14 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ತಾ. 15 ರಿಂದ 21ರ ವರೆಗೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಜಿಲ್ಲೆಯ ವಿವಿಧ ಸಹಕಾರ ಸಂಘಗಳಲ್ಲಿ ಆಚರಿಸಲಾಗುತ್ತಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅವರು, ತಾ. 14 ರಿಂದ ಸಹಕಾರಿ ಸಪ್ತಾಹ ಆರಂಭವಾಗಬೇಕಿತ್ತಾದರೂ ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ಇರುವದರಿಂದ ತಾ. 15 ರಿಂದ ಕಾರ್ಯಕ್ರಮಗಳು ಆರಂಭವಾಗಲಿದೆ ಎಂದರು.ತಾ. 15 ರಂದು ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಇತರ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ಬ್ಯಾಂಕ್ ಆವರಣದಲ್ಲಿ ‘’ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳದ ಕೃಷಿಯಲ್ಲಿ ಸಹಕಾರ ಸಂಸ್ಥೆಗಳ ಪ್ರಮುಖ ಪಾತ್ರ’’ ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಲಿದೆ. ಇದೇ ಹಂತದಲ್ಲಿ ಸಹಕಾರಿ ಸಪ್ತಾಹದ ಸಾಂಕೇತಿಕ ಉದ್ಘಾಟನೆಯೂ ನೆರವೇರಲಿದೆ ಎಂದು ತಿಳಿಸಿದರು.
ತಾ. 16 ರಂದು ಹೆಬ್ಬಾಲೆ ಹಾಲು ಉತ್ಪಾದಕರ ಸಹಕಾರ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನೊಂದಿಗೆ ‘’ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಮತ್ತು ಬ್ರಾಂಡ್ ನಿರ್ಮಾಣ’’ ಎನ್ನುವ ವಿಷಯದ ಕುರಿತು,
(ಮೊದಲ ಪುಟದಿಂದ) ನ.17 ರಂದು ಶನಿವಾರಸಂತೆ ಎಪಿಸಿಎಂಎಸ್ ನೇತೃತ್ವದಲ್ಲಿ ಸ್ಥಳೀಯ ಸಹಕಾರ ಸಂಘಗಳ ಸಹಯೋಗದೊಂದಿಗೆ ‘’ಸಾರ್ವಜನಿಕ, ಖಾಸಗಿ, ಸಹಕಾರಿ ಸಹಭಾಗಿತ್ವ ನಿರ್ಮಾಣ’’ ಎಂಬ ವಿಷಯದ ಕುರಿತು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.
ತಾ. 18 ರಂದು ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನೊಂದಿಗೆ ‘’ಸಹಕಾರ ಸಂಸ್ಥೆಗಳ ಮೂಲಕ ಸರಕಾರಿ ಯೋಜನೆಗಳು ಮತ್ತು ಆದಾಯೋತ್ಪನ್ನ ಜಾಗೃತಿ’’ ಮೂಡಿಸುವ ದಿನವನ್ನು ಹಾಗೂ ನ.19 ರಂದು ಕಾರುಗುಂದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ಥಳೀಯ ಸಹಕಾರ ಸಂಘಗಳ ಸಹಯೋಗದಲ್ಲಿ ‘’ಯುವಜನ ಮಹಿಳಾ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಸ್ಥೆಗಳು’’ ಎಂಬ ದಿನವನ್ನು ಆಚರಿಸಲಾಗುವದು ಎಂದು ತಿಳಿಸಿದರು.
ತಾ. 14 ರಂದು ಸಂಪಾಜೆ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಹಾಗೂ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ನಡೆಯಬೇಕಿದ್ದ ‘’ಸಹಕಾರಿ ಮಾರಾಟ ಸಂಸ್ಕರಣೆ ಮತ್ತು ಶೇಖರಣೆÉ’’ ದಿನವನ್ನು ನ.21 ರಂದು ಆಚರಿಸಲಾಗುವದು ಎಂದು ಮನು ಮುತ್ತಪ್ಪ ತಿಳಿಸಿದರು.
ಪ್ರಶಸ್ತಿ ಪ್ರದಾನ- ಜಿಲ್ಲೆಯ ಹಿರಿಯ ಸಹಕಾರಿಗಳನ್ನು ಗುರುತಿಸಿ ಶ್ರೇಷ್ಟ ಸಹಕಾರಿ, ಮಹಿಳಾ ಸಹಕಾರಿ ತಾಲೂಕು ಮಟ್ಟದ ಶ್ರೇಷ್ಟ ಸಹಕಾರಿ ಪ್ರಶಸ್ತಿಗಳನ್ನು ಯೂನಿಯನ್ ವತಿಯಿಂದ ಕಳೆದ ವರ್ಷದಿಂದ ನೀಡಲಾಗುತ್ತಿದ್ದು, ಅದರಂತೆ ಈ ಬಾರಿ ಜಿಲ್ಲಾ ಮಟ್ಟದ ಶ್ರೇಷ್ಟ ಸಹಕಾರಿ ಪ್ರಶಸ್ತಿಯನ್ನು ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಮುದ್ದಂಡ ಬಿ. ದೇವಯ್ಯ ಅವರಿಗೆ ನೀಡಿ ಗೌರವಿಸಲಾಗುವದು. ಇವರು ಕಳೆದ 43 ವರ್ಷಗಳಿಂದ ಸಹಕಾರ ಕ್ಷೇತ್ರ ವಿವಿಧ ಹಂತಗಳಲ್ಲಿ ಸಲ್ಲಿಸಿ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ನುಡಿದರು.
ಜಿಲ್ಲಾ ಮಟ್ಟದ ಶ್ರೇಷ್ಟ ಮಹಿಳಾ ಸಹಕಾರಿ ಪ್ರಶಸ್ತಿಯನ್ನು ಕಳೆದ 36 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸೋÀಮವಾರಪೆÉೀಟೆಯ ಉಷಾ ತೇಜಸ್ವಿ ಅವರಿಗೆ ನೀಡಲಾಗುತ್ತಿದ್ದು, ತಾಲೂಕು ಮಟ್ಟದ ಶ್ರೇಷ್ಟ ಸಹಕಾರ ಪ್ರಶಸ್ತಿಗಳನ್ನು ಮಡಿಕೇರಿ ತಾಲೂಕಿಗೆ ಸಂಬಂಧಿಸಿ ದಂತೆ ನಾಪೋಕ್ಲುವಿನ ಬೊಪ್ಪೇರ ಕಾವೇರಪ್ಪ, ವೀರಾಜಪೇಟೆ ತಾಲೂಕಿನ ಕರ್ನಂಡ ಎಂ. ಸೋಮಯ್ಯ, ಸೋಮವಾರಪೇಟೆ ತಾಲೂಕಿನ ಪ್ರಶಸ್ತಿಯನ್ನು ಎಂ.ಎನ್. ಕೊಮಾರಪ್ಪ ಅವರಿಗೆ ನೀಡಲಾಗುವದೆಂದು ಘೋಷಿಸಿದರು.
ತಾ. 20 ರಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಸಹಯೋಗದಲ್ಲಿ ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವದೆಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕರುಗಳಾದ ಎನ್.ಎ. ರವಿ ಬಸಪ್ಪ, ಮುಕ್ಕಾಟಿರ ಪ್ರೇಮ ಸೋಮಯ್ಯ, ರಾಮಚಂದ್ರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.