ಸಿದ್ದಾಪುರ, ನ. 15: ಗುಹ್ಯ ಗ್ರಾಮದ ಕಕ್ಕಟ್ಟುಕಾಡು ರಸ್ತೆ ವಿವಾದವು ನ್ಯಾಯಲಯದಲ್ಲಿ ಇತ್ಯಾರ್ಥವಾಗದೇ ಇರುವ ಹಿನ್ನೆಲೆ ದೇವಾಲಯ ಸಮಿತಿಯು ಆಕ್ಷೇಪಣೆ ವ್ಯಕ್ತಪಡಿಸಿ ದರಿಂದ ರಸ್ತೆಯ ಸರ್ವೆ ಕಾರ್ಯವನ್ನು ಸ್ಥಗಿತಗೊಳಿ¸ Àಲಾಯಿತು. ಗುಹ್ಯ ಗ್ರಾಮದ ಕಕ್ಕಟ್ಟುಕಾಡು ರಸ್ತೆ ವಿವಾದವು ಕಳೆದ ಸುಮಾರು ವರ್ಷಗಳಿಂದ ನಡೆಯುತ್ತಿದ್ದು, ಇತ್ತೀಚೆಗೆ ರಸ್ತೆ ಅಗಲೀಕರಣ ಮಾಡಿಕೊಡಬೇಕೆಂದು ಒತ್ತಾಯಿಸಿ ಕಕ್ಕಟ್ಟುಕಾಡು ನಿವಾಸಿಗಳು ಮಡಿಕೇರಿಯ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಉಪವಿಭಾಗಧಿಕಾರಿ ಭೇಟಿ ನೀಡಿ ರಸ್ತೆಯನ್ನು ಪರಿಶೀಲಿಸಿದ್ದರು. ನಂತರ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕರಿಗೆ ಸರ್ವೆ ಕಾರ್ಯ ನಡೆಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರದಂದು ಕಂದಾಯ ಪರಿವೀಕ್ಷಕ ಹಾಗೂ ಕಂದಾಯ ಇಲಾಖಾಧಿಕಾರಿಗಳು, ಸರ್ವೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಶ್ರೀ ಅಗಸ್ತ್ಯೇಶ್ವರ ದೇವಾಲಯದ ಬಳಿ ತೆರಳುತ್ತಿದ್ದಂತೆ ದೇವಾಲಯ ಸಮಿತಿಯವರು ಸರ್ವೆ ಕಾಂiÀರ್i ನಡೆಸದಂತೆ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಬಂದೋಬಸ್ತಿಗೆ ಆಗಮಿಸಿದ ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನೇತೃತ್ವದಲ್ಲಿ ದೇವಾಲಯ ಸಮಿತಿಯ ಪದಾಧಿಕಾರಿಗಳ ಹಾಗೂ ಕಕ್ಕಟ್ಟುಕಾಡು ಕೆಲವು ನಿವಾಸಿಗಳ ಸಮ್ಮುಖದಲ್ಲಿ ಕಂದಾಯ ಪರಿವೀಕ್ಷಕರವರ ಬಳಿ ಚರ್ಚಿಸಿದ ಸಂದರ್ಭ ದೇವಾಲಯ ಸಮಿತಿಯ ಪದಾಧಿಕಾರಿಗಳು ಮಾತನಾಡಿ 2006ರಲ್ಲಿ ರಸ್ತೆಯ ವಿಚಾರದಲ್ಲಿ ದೇವಾಲಯ ಸಮಿತಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಈವರೆಗೂ ಇದು ಇತ್ಯಾರ್ಥ ಆಗದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯವನ್ನು ಮಾಡದಂತೆ ಆಕ್ಷೇಪಣೆಯನ್ನು ಸಲ್ಲಿಸಿದರು. ಇದರಿಂದಾಗಿ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯ ಸಿಬ್ಬಂದಿ ಗಳು ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಂದಾಯ ಪರಿವೀಕ್ಷಕ ವಿನು ಮಾತನಾಡಿ ದೇವಾಲಯ ಸಮಿತಿಯ ಪದಾಧಿಕಾರಿಗಳು ಕಕ್ಕಟ್ಟುಕಾಡು ರಸ್ತೆಯ ವಿಚಾರದಲ್ಲಿ 2006 ರಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ ಎಂದು ಆಕ್ಷೇಪಣೆ ವ್ಯಕ್ತಪಡಿಸಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲಾಗುವದೆಂದು ತಿಳಿಸಿದರು.