ಕೂಡಿಗೆ, ನ. 15: ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಸಾಮೂಹಿಕ ಷಷ್ಠಿ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗಿನಿಂದಲೇ ವಿಶೇಷ ಅಭಿಷೇಕ ಮತ್ತು ಅಲಂಕಾರಗಳು ನಡೆದು ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಈ ಸಾಮೂಹಿಕ ಷಷ್ಠಿಪೂಜೆಯಲ್ಲಿ ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಭಾಗವಹಿಸಿದ್ದರು. ಪೂಜಾ ಕೈಂಕರ್ಯಗಳನ್ನು ದೇವಾಲಯದ ಪ್ರಧಾನ ಅರ್ಚಕ ನವೀನ್ ಭಟ್ ನೆರವೇರಿಸಿದರು.