ಸೋಮವಾರಪೇಟೆ, ನ. 15: ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವುಗಳ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ತಾ. 16ರಂದು (ಇಂದು) ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ತಿಳಿಸಿದ್ದಾರೆ.

ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ಜನಪದಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಪಾಠೋಪಕರಣ ತಯಾರಿ, ಚಿತ್ರ ಬಿಡಿಸುವ ಸ್ಪರ್ಧೆ, ಸಾಮಾನ್ಯ ವಿಜ್ಞಾನ ಮತ್ತು ವಿಜ್ಞಾನ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆಗಳು ನಡೆಯಲಿವೆ.