ಕೂಡಿಗೆ, ನ. 15: ಕೂಡಿಗೆಯ ಉದ್ಬವ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ತಿಕ ಮಾಸ ಪೂಜೆಯ ಅಂಗವಾಗಿ ತಾ. 20 ರಂದು ತುಳಸಿ ಪೂಜಾ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ ಕುಶಾಲನಗರದ ಕಾವೇರಿ ಕಲಾ ಪರಿಷತ್ ವತಿಯಿಂದ ಭರತನಾಟ್ಯ ಕಾರ್ಯಕ್ರಮ ಮತ್ತು ತಾ. 23 ರಂದು ಕಾರ್ತಿಕ ಮಾಸದ ಹುಣ್ಣಿಮೆಯ ಅಂಗವಾಗಿ ರವಿ ಭೂತನಕಾಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.