ಸುಂಟಿಕೊಪ್ಪ, ನ. 17: ಇಲ್ಲಿನ ತಲೆಹೊರೆ ಕಾರ್ಮಿಕರ ಕನ್ನಡ ಅಭಿಮಾನಿಗ¼ ಸಂಘದ ವತಿಯಿಂದ 7ನೇ ವರ್ಷದ ಕನ್ನಡ ರಾಜ್ಯೋತ್ಸವನ್ನು ಮೆರವಣಿಗೆ ಮತ್ತು ಭಾರತ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಯೋಧರಿಗೆ ಸನ್ಮಾನ ಮಾಡುವದರೊಂದಿಗೆ ಆಚರಿಸಲಾಯಿತು.

ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮೀಪ ಪೂಜೆ ಸಲ್ಲಿಸಿ ನಂತರ ಜನನಿ, ಭೂಮಿಕಾ,ಸೂರ್ಯ ಸ್ತ್ರೀಶಕ್ತಿ ಸಂಘಗಳ ಮಹಿಳೆಯರು ಕಳಶ ಹೊತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಲಾ ತಂಡದಿಂದ ವೀರಗಾಸೆ ಮತ್ತು ಪೂಜಾಕುಣಿತದೊಂದಿಗೆ ಉಲುಗುಲಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಕನ್ನಡ ವೃತ್ತದಲ್ಲಿ ಸಮಾವೇಶಗೊಳ್ಳಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ. ಲತೀಫ್ ಸಾರ್ವಜನಿಕರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವಿ.ಪಿ. ಶಶಿಧರ್ ಮಾತನಾಡಿದರು. ಕೊಡಗು ಜಿಲ್ಲಾ ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಎ. ಉಸ್ಮಾನ್, ಕೆದಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎ. ಬಾಲಕೃಷ್ಣ ರೈ. ಗ್ರಾ.ಪಂ. ಸದಸ್ಯೆ ರೆಹನಾ ಸುಲ್ತಾನ ಮಾತನಾಡಿದರು.

ಸಮಾರಂಭದ ವೇದಿಕೆಯಲ್ಲಿ ನಿವೃತ ಯೋಧರÀುಗಳಾದ ಬಿ.ಎನ್. ಜಯಂತ್, ಎನ್.ಬಿ. ಮಧು, ಶಶಿಕುಮಾರ್ ಅವರುಗಳು ಭಾರತೀಯ ಸೇನೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಸಂಘದ ಅಧ್ಯಕ್ಷ ಎಂ.ಎಸ್. ರವಿ ಹಾಗೂ ಅತಿಥಿಗಳು ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಫಲತಾಂಬೂಲ ನೀಡಿ ಸನ್ಮಾನಿಸಿದರು. ಸಂತಮೇರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಬಿ.ಎಂ.ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ಪಂಚಾಯಿತಿ ಸದಸ್ಯ ರಜಾಕ್ ಸ್ವಾಗತಿಸಿ ವಂದಿಸಿದರು.