ಗುಡ್ಡೆಹೊಸೂರು, ನ. 17: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ಆವರಣದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಮಾದಪಟ್ಟಣ, ಬೆಟ್ಟಗೇರಿ, ಬಸವನಹಳ್ಳಿಯ ಶಾಲಾ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
ಮಕ್ಕಳ ಆರೋಗ್ಯ, ಕಡ್ಡಾಯ ಶಿಕ್ಷಣ ಮತ್ತು ಬಾಲ ಕಾರ್ಮಿಕರಾಗಿ ಮಕ್ಕಳು ದುಡಿಯುತ್ತಿರುವ ಬಗ್ಗೆ, ಬಾಲ್ಯ ವಿವಾಹ ಮತ್ತು ಲೈಂಗಿಕ ಕಿರುಕುಳದ ಬಗ್ಗೆ ಅವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಪಂಚಾಯಿತಿ ಅಧ್ಯಕ್ಷೆ ಭಾರತಿ ಮತ್ತು ಉಪಾಧ್ಯಕ್ಷೆ ಲೀಲಾವತಿ, ಶಾಲಾ ಮುಖ್ಯ ಶಿಕ್ಷಕ ಸಣ್ಣಸ್ವಾಮಿ, ಗ್ರಾ.ಪಂ. ಸದಸ್ಯರಾದ ಶಿವಪ್ಪ, ಶಶಿ, ಕಾವೇರಪ್ಪ, ಹೇಮಾವತಿ ಮುಂತಾದವರು ಹಾಜರಿದ್ದರು.
ಶಾಲಾ ಮಕ್ಕಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಧ ಶಾಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿರುವ ಹಲವು ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಗ್ರಾ.ಪಂ. ಅಧ್ಯಕ್ಷರು ಮತ್ತು ಪಿ.ಡಿ.ಓ. ಅವರುಗಳು ಮಾತನಾಡಿ, ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವದಾಗಿ ಸಭೆಯಲ್ಲಿ ತಿಳಿಸಿದರು.
ಪಂಚಾಯಿತಿ ಕಾರ್ಯದರ್ಶಿ ನಂಜುಂಡಸ್ವಾಮಿ ಹಾಜರಿದ್ದರು. ಗುಡ್ಡೆಹೊಸೂರು ಶಾಲಾ ಸಹ ಶಿಕ್ಷಕಿ ಯಶುಮತಿ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ಯಾಂ ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು.