ಸೋಮವಾರಪೇಟೆ, ನ. 17: ಪಟ್ಟಣ ಪಂಚಾಯಿತಿಗೆ ನೂತನ ವಾಗಿ ಆಯ್ಕೆಯಾದ ಸದಸ್ಯರು ಗಳನ್ನು ಲಯನ್ಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಇದರೊಂದಿಗೆ ಪಟ್ಟಣದ ಅಭಿವೃದ್ಧಿ ಹಾಗೂ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಮನವಿ ಸಲ್ಲಿಸಲಾಯಿತು.
ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದಸ್ಯರುಗಳಾದ ಬಿ.ಆರ್. ಮಹೇಶ್, ಜಯಂತಿ ಶಿವಕುಮಾರ್, ಶೀಲಾ ಡಿಸೋಜ, ನಳಿನಿ ಗಣೇಶ್, ಶುಭಕರ್, ಪಿ.ಕೆ. ಚಂದ್ರು, ಉದಯಶಂಕರ್ ಅವರುಗಳನ್ನು ಸನ್ಮಾನಿಸಲಾಯಿತು.
ಲಯನ್ಸ್ ಅಧ್ಯಕ್ಷ ಯೋಗೇಶ್, ಜಿಲ್ಲಾ ಗವರ್ನರ್ ದೇವದಾಸ್ ಭಂಡಾರಿ, ಉಪ ರಾಜ್ಯಪಾಲ ಗೀತಾಪ್ರಕಾಶ್, ಪ್ರಾಂತೀಯ ಅಧ್ಯಕ್ಷ ಬೋಸ್ ಪೆಮ್ಮಯ್ಯ, ವಲಯ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಮಂಜುನಾಥ್ ಚೌಟ, ಖಜಾಂಚಿ ಬಸಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.