ಮಡಿಕೇರಿ, ನ. 17 : ಕೊಡಗಿನಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಕಾರ್ಯ ವಿಳಂಬವಾಗುತ್ತಿರುವ ಬೆನ್ನಲ್ಲೆ; ಕೊಡಗು ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ ರಚನೆಗೊಂಡಿದೆ.
ನೂತನ ಸಮಿತಿಯ ಅಧ್ಯಕ್ಷರಾಗಿ ಎಂ.ಬಿ. ದೇವಯ್ಯ, ಕಾರ್ಯಾಧ್ಯಕ್ಷರಾಗಿ ನಾಪಂಡ ರವಿಕಾಳಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕುಂಬುಗೌಡನ ಪ್ರಸನ್ನ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಎಸ್.ಪಿ.ಪೊನ್ನಪ್ಪ, ಎ.ಟಿ.ಮಾದಪ್ಪ, ಮೋಟನಾಳಿರ ಸನ್ನಿ, ಕಾರ್ಯದರ್ಶಿಗಳಾಗಿ ಕಿಮ್ಮಡಿರ ಜಗದೀಶ, ಕೆ.ಪಿ.ಗಣಪತಿ, ಸುಭಾಷ್ ಆಳ್ವ, ಟಿ.ಎಂ.ಮೋಹನ ಆಯ್ಕೆಯಾಗಿದ್ದು, ಸದಸ್ಯರುಗಳಾಗಿ 27 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಕಾಫಿ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಂತ್ರಸ್ತರ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ನೂತನ ಸಮಿತಿಯನ್ನು ರಚಿಸಲಾಗಿದ್ದು, ಸರಕಾರದ ಗಮನ ಸೆಳೆಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.