ಮಡಿಕೇರಿ, ನ.19: ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಇ-ಆಡಳಿತ ಕೇಂದ್ರದ ಸಹಯೋಗದೊಂದಿಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಆಧಾರ್ ಅದಾಲತ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಚಾಲನೆ ನೀಡಿದರು.

ಜಿಲ್ಲೆಯ ನಾಗರಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ತಾ.24 ರವರೆಗೆ ಆಧಾರ ಅದಾಲತ್ ನಡೆಯಲಿದೆ. ಸರ್ಕಾರದ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆ ಅತ್ಯಂತ ಪ್ರಯೋಜನಕಾರಿಯಾಗಿರುವ ಹಿನ್ನಲೆಯಲ್ಲಿ ಆಧಾರ್ ನೋಂದಣಿ ಮಹತ್ವ ಪಡೆದಿದೆ. ಆಧಾರ್ ತಿದ್ದುಪಡಿ, ಆಪರೇಷನ್, ಹೊಸ ನೋಂದಣಿ ಹಾಗೂ ಆಧಾರ್‍ಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು.

ಸಾರ್ವಜನಿಕರು ಪಡಿತರ ಚೀಟಿ, ಬ್ಯಾಂಕ್ ಪಾಸ್‍ಪುಸ್ತಕ, ಪಾನ್‍ಕಾರ್ಡ್ ಮತದಾರರ ಗುರುತಿನ ಚೀಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಚಾಲನಾ ಪರವಾನಗಿ ಪ್ರತಿ ಅಥವಾ ಇನ್ನಿತರ ವಿಳಾಸ ದಾಖಲಾತಿಗಳೊಂದಿಗೆ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಮೇಶ್, ಆಧಾರ ಸಂಸ್ಥೆಯ ಪ್ರತಿನಿಧಿ ಇಳಯರಾಜ್ ಇತರರು ಇದ್ದರು.