ಕೂಡಿಗೆ, ನ. 19: ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2018-19ನೇ ವಾರ್ಷಿಕ ವಿಶೇಷ ಶಿಬಿರ ತಾ. 20 ರಿಂದ (ಇಂದಿನಿಂದ) 26ರವರೆಗೆ ಮಣಜೂರಿನಲ್ಲಿ ನಡೆಯಲಿದೆ.
ಶಿಬಿರವನ್ನು ಶಿರಂಗಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎನ್.ಎಸ್. ರಮೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್.ಜಯಣ್ಣ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎನ್.ಬಿ.ಮಹೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಚಿತ್ರಬಾಯಿ, ದೇವತಾ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಪಂಚಾಯ್ತಿ ಕಾರ್ಯದರ್ಶಿ ಸಿ.ಎನ್.ಲೋಕೇಶ್, ಪ್ರೌಢಶಾಲಾ ಮುಖ್ಯಶಿಕ್ಷಕ ಸೋಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಬಿ.ಹರೀಶ್ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಹೆಚ್.ಜೆ.ನಾಗರಾಜ್ ವಹಿಸಲಿದ್ದಾರೆ.