ಸೋಮವಾರಪೇಟೆ, ನ.19: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಸ್ಥಳೀಯ ಸಾಂದೀಪನಿ ಆಂಗ್ಲಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಎಸ್. ಸುಧನ್ವ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಂಸ್ಕøತ ಧಾರ್ಮಿಕ ಪಠಣದಲ್ಲಿ ಪ್ರಥಮ ಹಾಗೂ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಪ್ರಶಸ್ತಿಗೆ ಭಾಜನರಾಗಿದ್ದಾರೆ.