ಕೂಡಿಗೆ, ನ. 19 : ಕೂಡಿಗೆಯ ಕಾರ್ಪೋರೇಷನ್ ಬ್ಯಾಂಕ್‍ನ ಸ್ವಉದ್ಯೋಗ ತರಬೇತಿ ಕೇಂದ್ರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಹೈನುಗಾರಿಕಾ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನಿರ್ದೇಶಕ ಸುರೇಶ್ ನೆರವೇರಿಸಿದರು. ಇದೇ ಸಂದರ್ಭ ಡಾ.ಸುರೇಶ್ ಅವರು ಹೈನುಗಾರಿಕೆಯಲ್ಲಿ ರೈತರು ಪಾಲ್ಗೊಳ್ಳುವಿಕೆಯ ಬಗ್ಗೆ ವಿವರವಾಗಿ ತಿಳಿಸಿದರು. ಸ್ವ ಉದ್ಯೋಗ ತರಬೇತಿ ಕೇಂದ್ರದ ಅಧಿಕಾರಿ ಸಲಾವುದ್ದೀನ್, ಹರೀಶ್ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು.