ಮಡಿಕೇರಿ, ನ. 20: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಗೋಣಿಕೊಪ್ಪ ನ್ಯಾಷನಲ್ ಅಕಾಡೆಮಿ ಸ್ಕೂಲ್ ಅತ್ತೂರು ಮತ್ತು ವೀರಾಜಪೇಟೆ ತೂಕ್‍ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ಇವರ ಸಹಯೋಗದಲ್ಲಿ ತಾ. 21 ರಂದು ಬೆಳಿಗ್ಗೆ 9 ಗಂಟೆಗೆ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 150ನೇ ಹುಟ್ಟಿದ ಹಬ್ಬ ಮತ್ತು 75ನೇ ಪುಣ್ಯ ದಿನಾಚರಣೆ ಸಮಾರಂಭ ನಡೆಯಲಿದೆ.
ವೀರಾಜಪೇಟೆಯ ದೊಡ್ಡಟ್ಟಿ ಚೌಕಿಯಲ್ಲಿ ಇರುವ ಅಪ್ಪಚ್ಚ ಕವಿಯರ ಸ್ಮಾರಕಕ್ಕೆ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದೀಪ ಬೆಳಗಿಸುವದ ರೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಗೋಣಿಕೊಪ್ಪದ ನ್ಯಾಷನಲ್ ಅಕಾಡೆಮಿ ಶಾಲೆಯವರೆಗೆ ಮೆರವಣಿಗೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ನ್ಯಾಷನಲ್ ಅಕಾಡೆಮಿ ಶಾಲೆಯ ಎದುರಿನಲ್ಲಿರುವ ಅಪ್ಪನೆರವಂಡ ಕುಂಞಪ್ಪ ಅವರ ನೆನಪಿಗಾಗಿ ಮಾಡಿರುವ ಕಟ್ಟೋಳೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೆಳಿಗ್ಗೆ 10.30 ಗಂಟೆಗೆ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.