ಮೂರ್ನಾಡು, ನ. 21: ಮೂರ್ನಾಡು ಪದವಿ ಕಾಲೇಜಿನ ಕಾಲೇಜು ಗೀತೆಯನ್ನು ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.
ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಕಾಲೇಜು ಗೀತೆಯನ್ನು ಬಿಡುಗಡೆ ಮಾಡಿದರು. ಕಾಲೇಜು ಗೀತೆಯನ್ನು ಸಾಹಿತಿ ಗಿರೀಶ್ ಕಿಗ್ಗಾಲು ರಚಿಸಿ, ಮಡಿಕೇರಿಯ ಜಯಲಕ್ಮಿ ಶೇಖರ್ ಹಾಡಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ, ಕಾಲೇಜಿನ ಆಂತರಿಕ ಗುಣಮಟ್ಟ ಮೌಲ್ಯಮಾಪ ಸಮಿತಿ ಸಂಚಾಲಕ ನಾಟೋಳಂಡ ನವೀನ್ ಹಾಗೂ ಪ್ರಾಧ್ಯಾಪಕ ವೃಂದದವರು ಹಾಜರಿದ್ದರು.