ಚೆಯ್ಯಂಡಾಣೆ, ನ. 21: ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾಮದ ಅಯ್ಯಪ್ಪ ಯುವಕ ಸಂಘದಲ್ಲಿ ಸ್ಥಳೀಯ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮತ್ತು ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಬೆಳಿಯಂಡ್ರ ರತೀಶ್ ಕುಮಾರ್ ಶರಣ್ ಅವರನ್ನು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರಗಳ ಸಮ್ಮುಖದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.