ಸೋಮವಾರಪೇಟೆ, ನ. 21: ನಂಜಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಜೇಸೀ ಸಪ್ತಾಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಮೂಡಿ ಬರುತ್ತಿದ್ದು, ಪ್ರೇಕ್ಷಕರ ಮನಸೂರೆಗೊಂಡವು. ಕಾರ್ಯ ಕ್ರಮದಲ್ಲಿ ಪುಟಾಣಿಗಳಿಗೆ ಛದ್ಮವೇಷ ಸ್ಪರ್ಧೆ, ವಿದ್ಯಾರ್ಥಿಗಳಿಗೆ ಸೊಲೋ ಡ್ಯಾನ್ಸ್ ಸ್ಪರ್ಧೆ, ಪ್ರವೀಣ್ ಮತ್ತು ತಂಡದಿಂದ ಜಾನಪದ ಸಂಗೀತ ಕಾರ್ಯಕ್ರಮ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಬರವಣಿಗೆ ಸ್ಪರ್ಧೆ ಸೇರಿದಂತೆ ಸಾಂಸ್ಕøತಿಕ ಕಾರ್ಯಗಳು ನಡೆದವು.
ಸಂಸ್ಥೆಯ ಅಧ್ಯಕ್ಷ ಕೆ.ಎ. ಪ್ರಕಾಶ್, ಕಾರ್ಯದರ್ಶಿ ಎಂ.ಎ. ರುಬೀನಾ, ಜಯಲಕ್ಷ್ಮೀ ಸುಮಾ ನಿರಂಜನ್ ಅವರುಗಳು ಸೋಲೋ ಡ್ಯಾನ್ಸ್ ಸ್ಪರ್ಧೆಯನ್ನು ನಿರ್ವಹಿಸಿದರೆ, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಹಾಗೂ ವಿಷನ್ ಟು ವೆಲ್ತ್ ಸಂಸ್ಥೆಯ ಬಿ. ಈ. ಅರುಣ್‍ಕುಮಾರ್ ಅವರುಗಳು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.