ಕೂಡಿಗೆ, ನ. 21: ಅವಿವಾಹಿತ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡು ಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ನಡೆದಿದೆ.
ಕೂಡಿಗೆ ನಿವಾಸಿ ನರೇಂದ್ರ ಅಲಿಯಾಸ್ ಸನ್ನಿ (57) ಮೃತ ವ್ಯಕ್ತಿ. ಕಳೆದ ಒಂದು ವಾರದಿಂದ ತನ್ನ ಸ್ನೇಹಿತನ ಮನೆಯಲ್ಲಿ ವಾಸವಿದ್ದ ನರೇಂದ್ರ ಬುಧವಾರ ಬೆಳಿಗ್ಗೆ ಆತನ ಮನೆಯ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.