ಸೋಮವಾರಪೇಟೆ, ನ. 21: ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 101ನೇ ಜನ್ಮದಿನವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಕಾರ್ಯದರ್ಶಿ ಹೆಚ್.ಬಿ. ರಾಜಪ್ಪ, ಸಲಹೆಗಾರ ಪಳನಿಸ್ವಾಮಿ, ಗಣೇಶ್, ಎಲ್. ರವಿ, ಹೆಚ್.ಆರ್. ಶಿವ, ಡಿ. ಮಂಜು, ಚೆನ್ನಯ್ಯ, ಆನಂದ್, ಜಮೀರ್, ಹೆಚ್.ಆರ್. ನಾಗರಾಜು, ಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.