ಮಡಿಕೇರಿ, ನ. 21: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ತಾ. 22 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ಕ್ಲಬ್‍ನ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನ ನಡೆಯಲಿದೆ. ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ನಾಪೋಕ್ಲು ಗ್ರಾ.ಪಂ. ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಜಿ.ಪಂ. ಸದಸ್ಯ ಮುರುಳಿ ಕರುಂಬಮಯ್ಯ, ಮಡಿಕೇರಿ ತಾ.ಪಂ. ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ತಾ.ಪಂ. ಸದಸ್ಯರಾದ ಕೋಡಿಯಂಡ ಇಂದಿರಾ, ಉಮಾಪ್ರಭು, ಮಡಿಕೇರಿ ಪಿಎಲ್‍ಡಿ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಎ.ಪಿ.ಎಂ.ಸಿ. ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ನಾಪೋಕ್ಲು ಪ್ರಾ.ಕೃ.ಪ.ಸ.ಸಂ.ನ ಅಧ್ಯಕ್ಷ ಕೆ.ಎಸ್. ಹರೀಶ್ ಪೂವಯ್ಯ, ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ಕ್ಲಬ್‍ನ ಅಧ್ಯಕ್ಷ ಕಾಂಡಂಡ ಜಯಾ ಕರುಂಬಯ್ಯ, ಮಡಿಕೇರಿ ಜಂಟಿ ಕೃಷಿ ನಿರ್ದೇಶಕ ಕೆ. ರಾಜು ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.