ಮೂರ್ನಾಡು, ನ. 20: ಇತ್ತೀಚಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಚೇರಂಬಾಣೆಯ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕೆ.ಎಂ. ಸುಪ್ರೀತ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಎಂ.ಕೆ ಶ್ರೀವತ್ಸ ಸಂಸ್ಕøತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಕೆ.ಎಸ್. ರಾಮಮೂರ್ತಿ ತಿಳಿಸಿದ್ದಾರೆ.