ಮಡಿಕೇರಿ, ನ. 21: ಇಲ್ಲಿನ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವರ್ಷಂಪ್ರತಿಯಂತೆ ಕಾರ್ತಿಕ ಮಾಸದ ದೀಪಾರಾಧನೆಯೊಂದಿಗೆ ಉತ್ಥಾನ ದ್ವಾದಶಿಯಂದು ತುಳಸಿ ಪೂಜೆ ಹಾಗೂ ಗೋಪೂಜೆ ನೆರವೇರಿತು. ಸನ್ನಿಧಿಯ ಪ್ರಧಾನ ಅರ್ಚಕ ಬಿ.ಜಿ. ನಾರಾಯಣ ಭಟ್ ನೇತೃತ್ವದಲ್ಲಿ ದೈವಿಕ ಕೈಂಕರ್ಯಗಳೊಂದಿಗೆ ಪೂಜೆ ನೆರವೇರಿತು.
ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪುಲಿಯಂಡ ಜಗದೀಶ್, ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ದಮಯಂತಿ, ಉದಯಕುಮಾರ್, ಮಾಜಿ ಅಧ್ಯಕ್ಷ ರಮೇಶ್ ಹೊಳ್ಳ, ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್. ಸಂಪತ್‍ಕುಮಾರ್, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ. ಅನಂತ ಶಯನ ಸೇರಿದಂತೆ ಅಧಿಕ ಭಕ್ತರು ಪಾಲ್ಗೊಂಡಿದ್ದರು.