ಸುಂಟಿಕೊಪ್ಪ, ನ. 21: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1986-87ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಕ್ರೀಡಾಕೂಟವನ್ನು ಆಯೋಜಿಸ ಲಾಯಿತು. ಈ ಸಂದರ್ಭ ಪ್ಯಾಟೆ ಹುಡುಗಿ ಹಳ್ಳಿಲೈಪ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ಮೈಕಲ್ ಬೆನ್ಸಿ ದಂಪತಿಯರ ಪುತ್ರಿ ಮೆಬಿನಾ ಮೈಕಲ್ ಅವರನ್ನು 1986-87ನೇ ಸಾಲಿನ ವಿದ್ಯಾರ್ಥಿಗಳ ಸಂಘದಿಂದ ಮುಖ್ಯ ಅತಿಥಿ ಎಂ.ಪಿ. ದಿನೇಶ್, ಶಾಲಾ ಮುಖ್ಯೋಪಾ ಧ್ಯಾಯಿನಿ ಸಿಸ್ಟರ್ ವೀರಾ, ಸಂತ ಕ್ಲಾರ ಕನ್ಯಾಸ್ತ್ರೀ ಮಠದ ಮೇಲ್ವಿಚಾರಕಿ ಸಿಸ್ಟರ್ ವೈಲೆಟ್ ರಾಡ್ರಿಗಸ್, ವಿದ್ಯಾರ್ಥಿ ಸಂಘದ ನಾಯಕಿ ಫಯಿಜಾ ಮೆಬಿನಾ ಅವರಿಗೆ ಸನ್ಮಾನಿಸಿ, ಗೌರವಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವಿರಾ ಮಾತನಾಡಿ, ಈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ಶಾಲೆಯ ಮೇಲೆ ಅಭಿಮಾನವಿಟ್ಟು ಕಲಿಯುತ್ತಿರುವ ವಿದ್ಯಾರ್ಥಿಗಳ ಜೊತೆಗೂಡಿ ಮಕ್ಕಳ ದಿನಾಚರಣೆ ಸಂಭ್ರಮದಲ್ಲಿ ಪಾಲ್ಗೊಂಡಿರುವದು ವಿಶೇಷವಾಗಿದೆ. ಮುಂದಿನ ದಿನಗಳಲ್ಲಿ ನೀವುಗಳು ವಿದ್ಯಾಭ್ಯಾಸ ಮಾಡಿರುವ ಶಿಕ್ಷಣ ಸಂಸ್ಥೆಗಳ ಬಗ್ಗೆ ಗೌರವ ನೀಡುವ ಮನೋಬಾವನೆಯನ್ನು ಬೆಳಸಿಕೊಳ್ಳ ಬೇಕೆಂದು ಹಿತವಚನ ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ ವಿದ್ಯಾರ್ಥಿ ಎಂ.ಪಿ. ದಿನೇಶ್ ಮಾತನಾಡಿ, ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಶುಭಹಾರೈಸಿ ಮಕ್ಕಳಲ್ಲಿ ವಿದ್ಯೆಯೊಂದಿಗೆ ಕ್ರೀಡಾ ಮನೋಬಾವನೆ ಕಂಡು ಬಂದಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ತೆರಳಿದ್ದ ವಿದ್ಯಾರ್ಥಿಗಳು ಉತ್ತಮ ಪ್ರತಿಭೆಯನ್ನು ಬೆಳಸಿಕೊಂಡು ಉನ್ನತ ಸ್ಥಾನದಲ್ಲಿ ಸಾಧನೆ ಮಾಡುತ್ತಿರುವದು ಶ್ಲಾಘನೀಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಫಯಿಜಾ ವಹಿಸಿದ್ದರು. ನಂತರ 1986-87ನೇ ಸಾಲಿನ ವಿದ್ಯಾರ್ಥಿಗಳ ಸಂಘದಿಂದ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದ್ದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು ಒಂದಾಗಿ ಸವಿದರು.