ವೀರಾಜಪೇಟೆ, ನ. 21: ವೀರಾಜಪೇಟೆ ತಲಕಾವೇರಿ ರಾಜ್ಯ ಹೆದ್ದಾರಿಯಲ್ಲಿ ಮರಂದೋಡ ಗ್ರಾಮದ ನಿಡುಮಂಡ ಸೇತುವೆಗೆ ಏಂಖಆಅಐ ವತಿಯಿಂದ 1 ಕೋಟಿ 75 ಲಕ್ಷದ ಕಾಮಗಾರಿಗೆ ಚಾಲನೆ ನೀಡಲಾಯಿತು. ವೀರಾಜಪೇm ಕ್ಷೇತ್ರದ ಶಾಸಕ, ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಸಂತು ಸುಬ್ರಮಣಿ, ಕೃಷಿ ಪತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರುಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯ ಗ್ರಾಮಸ್ಥರುಗಳು ಹಾಜರಿದ್ದರು.