ಕೂಡಿಗೆ, ನ. 21: ಕೂಡಿಗೆ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿನ ವೃದ್ಧರಿಗೆ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಶಕ್ತಿ ಕೇಂದ್ರದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಣ್ಣು-ಹಂಪಲುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ಪಂಚಾಯಿತಿ ಸದಸ್ಯೆ ಮಂಜಳಾ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷೆ ಸಾವಿತ್ರಿ ರಾಜು, ಪ್ರಧಾನ ಕಾರ್ಯದರ್ಶಿ ಕೆ. ಕನಕ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಕೇಂದ್ರದ ನಿರ್ದೇಶಕರಾದ ವಾಣಿ, ರತ್ನಮ್ಮ, ಜಯಮ್ಮ, ಮಂಜಳ ಹಾಗೂ ವೃದ್ಧಾಶ್ರಮದ ವ್ಯವಸ್ಥಾಪಕ ಚಂದ್ರ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು.