ಸೋಮವಾರಪೇಟೆ, ನ. 22: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಇಲ್ಲಿನ ಓ.ಎಲ್.ವಿ. ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಜಿತಿನ್, ಸುಮನ, ಧೀಮಂತ್, ಸ್ವರೂಪ್, ಜಾಹ್ನವಿ, ಮಾನ್ಸ್, ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಾಂಜಲಿ ಅವರುಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕ್ಲೇ ಮಾಡಲಿಂಗ್‍ನಲ್ಲಿ ಗುರುಪ್ರಸಾದ್ ದ್ವಿತೀಯ, ಚಿತ್ರಕಲೆ ಸ್ಪರ್ಧೆಯಲ್ಲಿ ಮಾನಶ್ರೀ ದ್ವಿತೀಯ ಸ್ಥಾನ ಗಳಿಸಿದ್ದಾರೆ.