ಮಡಿಕೇರಿ, ನ. 22: ಸೋಮವಾರಪೇಟೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಲಿಖಿತ ವಿ.ವಿ. ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈಕೆ ವಿಜಿ ವೆಂಕಟೇಶ್ ಹಾಗೂ ವಿ.ವಿ. ಶೀಲಾ ದಂಪತಿಯ ಪುತ್ರಿ.