ಮಡಿಕೇರಿ, ನ. 22: 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ರೂ. 25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವದು.

ಜನವರಿ 2017 ರಿಂದ ಡಿಸೆಂಬರ್ 2018 ರೊಳಗೆ ಮೇಲ್ಕಂಡ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು 2019 ಜನವರಿ 5 ರ ಸಂಜೆ 5.30 ರೊಳಗೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಕನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆ, ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ ಬೆಂಗಳೂರು-560097 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಇತರ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ವೀಕ್ಷಿಸಬಹುದಾಗಿದೆ ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಗೆ

ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಒಂಬತ್ತನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು 2019-20ನೇ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 2018-19ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ. ಪರೀಕ್ಷೆಯು 2019ರ ಫೆಬ್ರವರಿ 2 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ 9731823457, 9482557322, 9449592048 ನ್ನು ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ವಿಶೇಷ ನೇರ ನೇಮಕಾತಿ

ನಗರಸಭೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ (ಮಡಿಕೇರಿ ನಗರಸಭೆಯಲ್ಲಿ ಹಾಲಿ ಪೌರಕಾರ್ಮಿಕರಾಗಿ ಕ್ಷೇಮಾಭಿವೃದ್ಧಿ/ ದಿನಗೂಲಿ/ಗುತ್ತಿಗೆ/ಹೊರಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಇತರೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ) ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿ ಫೆಬ್ರವರಿ 22 2018 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಹುದ್ದೆಗಳ ಸಂಖ್ಯೆ ಹಾಗೂ ಹುದ್ದೆಗಳ ವರ್ಗೀಕರಣ ಪಟ್ಟಿಯಲ್ಲಿ ತಿದ್ದುಪಡಿಯಾಗಿರುತ್ತದೆ.

ಈ ಹಿಂದೆ ಅರ್ಜಿಗಳನ್ನು ಸಲ್ಲಿಸಿದವರು ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವದಿಲ್ಲ. ಅರ್ಜಿ ಸಲ್ಲಿಸಲು ಬಿಟ್ಟು ಹೋಗಿರುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಈ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 2018ರ ನವೆಂಬರ್, 28 ರೊಳಗೆ ಮಡಿಕೇರಿ ಜಿಲ್ಲಾಧಿಕಾರಿಗಳು ಇವರ ಹೆಸರಿನಲ್ಲಿ ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಮಡಿಕೇರಿ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. 2018ರ ಫೆಬ್ರವರಿ 2 ರಂದು ಹೊರಡಿಸಲಾದ ಅಧಿಸೂಚನೆಯ ಷರತ್ತುಗಳಲ್ಲಿ ಯಾವದೇ ಬದಲಾವಣೆ ಇರುವದಿಲ್ಲ ಎಂದು ಜಿಲ್ಲಾಧಿಕಾರಿಗಳು ಹಾಗೂ ಪೌರ ಕಾರ್ಮಿಕರ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಗೆ

ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಆರನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು 2019-20ನೇ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 2018-19ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ. ಪರೀಕ್ಷೆಯು 2019ರ ಏಪ್ರಿಲ್ 6 ರಂದು ನಡೆಯಲಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ 9731823457, 9482557322, 9449592048 ನ್ನು ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.