ಮಡಿಕೇರಿ, ನ. 22: ಜನವರಿ 1.2019 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗವಣೆ ಮಾಡಲು ಹಾಗೂ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ 2018- ಮಡಿಕೇರಿ ಮತ್ತು 2019-ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲಿ ತಾ. 23 ರಿಂದ 25 ರವರೆಗೆ ಮೂರು ದಿನಗಳ ಕಾಲ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ದಿನಗಳಂದು ಆಯಾ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳು ಮತಗಟ್ಟೆಯಲ್ಲಿ ಹಾಜರಿದ್ದು, ನಮೂನೆ-6, ನಮೂನೆ-6ಎ, ನಮೂನೆ-7, ನಮೂನೆ-8, ನಮೂನೆ-8 ಎ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ಇರುವ ಮತದಾರರು ನಮೂನೆ-6ರಲ್ಲಿ ಹಾಗೂ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8ಎ ರಲ್ಲಿ ಹಾಗೂ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿಗಳನ್ನು ಪೂರಕ ದಾಖಲೆಗಳೊಂದಿಗೆ ನಿಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ತಾ. 23 ರಿಂದ ನವೆಂಬರ್ 25 ರವರೆಗೆ ವಿಶೇಷ ನೋಂದಣಿ ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.ಞoಜಚಿgu.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.