ಶನಿವಾರಸಂತೆ, ನ. 22: ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ವತಿಯಿಂದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮಡಿಕೇರಿ ನಬಾರ್ಡ್ ಅಧಿಕಾರಿ ಎಂ.ಸಿ. ನಾಣಯ್ಯ ಮಾತನಾಡಿ, ದೇಶದ ಆರ್ಥಿಕತೆಯ ಬಗ್ಗೆ ಹಾಗೂ ಬ್ಯಾಂಕಿನಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮಡಿಕೇರಿ ಕಾವೇರಿ ಗ್ರಾಮೀಣ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ನಾಗೇಂದ್ರ ಕುಮಾರ್ ಮಾತನಾಡಿ, ಗ್ರಾಹಕರಿಗೆ ಬ್ಯಾಂಕಿನ ವಿಮೆ ಮತ್ತು ಪಿಂಚಣಿ ಬಗ್ಗೆ ವಿವರಣೆ ನೀಡಿದರು.
ಶಾಖಾ ವ್ಯವಸ್ಥಾಪಕ ಹೆಚ್. ಷಣ್ಮುಖ ಮಾತನಾಡಿ, ಬ್ಯಾಂಕಿನಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿ ಹೇಳಿದರು. ಕೊಡ್ಲಿಪೇಟೆ ಶಾಖೆಯ ರಮೇಶ್ ಭಟ್ ಮಾತನಾಡಿ, ಸಾಲ ಮರುಪಾವತಿ ಬಗ್ಗೆ ಗ್ರಾಹಕರಿಗೆ ತಿಳಿಹೇಳಿದರು. ಕಾರ್ಯಕ್ರಮದಲ್ಲಿ ಗ್ರಾಹಕ ರೈತರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.