ಸೋಮವಾರಪೇಟೆ, ನ.24: ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತಾ.27ರಂದು ಪೂರ್ವಾಹ್ನ 10.30ಗಂಟೆಗೆ ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಕಲಚೇತನರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ವಿಕಲಚೇತನ ಮಕ್ಕಳು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್‍ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕಿದ್ದು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕಿದೆ. ಹೆಚ್ಚಿನ ಮಾಹಿತಿಗೆ ಮೊ: 9008685129 ಸಂಪರ್ಕಿಸಬಹುದಾಗಿದೆ.