ಸುಂಟಿಕೊಪ್ಪ, ನ. 24: ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಇಲ್ಲಿಗೆ ಸಮೀಪದ ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಂ.ಎಸ್. ಅಭಿಜಿತ್ ಜಿಲ್ಲಾಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯಲಿರುವ ವಿಭಾಗಿಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.