ಮಡಿಕೇರಿ, ನ.24: ವೀರಾಜಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಮಹದೇವಸ್ವಾಮಿ ಮತ್ತು ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ. ಯತ್ನಟ್ಟಿ ಇವರು ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆ ಸಂಬಂಧ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಹೊಸೂರು (ಬೆಟ್ಟಿಗೇರಿ)ಯ ತೋಟದ ಲೈನ್‍ಮನೆಗೆ ಭೇಟಿ ನೀಡಿದ ಸಂದರ್ಭ ಎರಡು ಮಕ್ಕಳು ಕಳೆದ ಎರಡು ವರ್ಷಗಳಿಂದ ಶಾಲೆಗೆ ಹೋಗದೆ ಇರುವದು ತಿಳಿದು ಪೋಷಕರ ಮನವೊಲಿಸಿ ಮಕ್ಕಳನ್ನು ನಗರದ ಬಾಲಮಂದಿರದಲ್ಲಿ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ ಮಾಡಲಾಯಿತು.