ಗೋಣಿಕೊಪ್ಪಲು, ನ. 24: ಕೊಡವ ಐರಿ ಸಮಾಜ ಮಹಾಸಭೆಯು ತಾ.26 ರಂದು ಮೂರ್ನಾಡು ಗೌಡ ಸಮಾಜದಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಮಾಜದ ಅಧ್ಯಕ್ಷ ಮೇಲತಂಡ ರಮೇಶ್ ಅಧ್ಯಕ್ಷೆಯಲ್ಲಿ ನಡೆಯಲಿದೆ.
ಇದೇ ಸಂದರ್ಭ ಲೆಕ್ಕಪತ್ರ ಮಂಡನೆಯೊಂದಿಗೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿದ ಐರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗುವದು ಎಂದು ಕಾರ್ಯದರ್ಶಿ ಕಾಮೆಯಂಡ ಗಣೇಶ್ ತಿಳಿಸಿದ್ದಾರೆ.