ಮಡಿಕೇರಿ, ನ.25 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ, ಮಡಿಕೇರಿ ಇವರ ಆಶ್ರಯದಲ್ಲಿ ತಾ. 26 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ನ್ಯಾಯಾಲಯದ ಆವರಣದಲ್ಲಿ “ಸಂವಿಧಾನ ದಿನಾಚರಣೆ” ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ವಿಜಯ ಕುಮಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಬಿ.ಕೆ.ಮನು ಇತರರು ಪಾಲ್ಗೊಳ್ಳಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ವಿಜಯ ಕುಮಾರ್ ‘ನಮ್ಮ ಸಂವಿಧಾನ’ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.