ಸೋಮವಾರಪೇಟೆ, ನ. 25: ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ತಾ. 26 ರಂದು ಕನಕದಾಸ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಯಿತು.
ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮಹೇಶ್ ಮಾತನಾಡಿ, ಅಂದು ಬೆಳಿಗ್ಗೆ 10.30ಕ್ಕೆ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹಾಗೂ ಜಿ.ಪಂ., ತಾ.ಪಂ. ಸದಸ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಭೆಯಲ್ಲಿ ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಟಿ. ಶ್ರೀಕಾಂತ್ ಇತರರು ಉಪಸ್ಥಿತರಿದ್ದರು.