ಕೂಡಿಗೆ, ನ. 25: ಹೆಬ್ಬಾಲೆ ಪದವಿಪೂರ್ವ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಪೆÇಲೀಸ್, ಕುಶಾಲನಗರ ಗ್ರಾಮಾಂತರ ಠಾಣೆಯ ವತಿಯಿಂದ ಮಕ್ಕಳಿಗೆ ಜಾಗೃತಿ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನವೀನಗೌಡ ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು, ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು, ಭ್ರಷ್ಟಾಚಾರ ವಿರೋಧಿ, ಮಕ್ಕಳ ಕಳ್ಳ ಸಾಗಣಿಕೆ, ಮಕ್ಕಳ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಅರಿವು ಜಾಗೃತಿ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವರಾಜುಶೆಟ್ಟಿ, ಕಾಲೇಜಿನ ಉಪನ್ಯಾಸಕ ವರ್ಗ, ಪೆÇಲೀಸ್ ಸಿಬ್ಬಂದಿ ನಾಗರಾಜು ಮೊದಲಾದವರು ಇದ್ದರು.