ಮಡಿಕೇರಿ, ನ. 25: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ತಾ. 29 ರಂದು ಬೆಳಿಗ್ಗೆ 9.30 ಕ್ಕೆ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಆಶ್ರಯದಲ್ಲಿ ಜಿಲ್ಲಾ ಮಟ್ಟದ 26 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಲಿದೆ.

ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ನಡೆದ ತರಬೇತಿಯಲ್ಲಿ ತರಬೇತಿ ಪಡೆದ ಮಾರ್ಗದರ್ಶಿ ಶಿಕ್ಷಕರು ಅಂದು ತಮ್ಮ ಶಾಲಾ ತಂಡದೊಂದಿಗೆ ಆಗಮಿಸಬೇಕು ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಸಿ.ಎಸ್.ಸುರೇಶ್ ತಿಳಿಸಿದ್ದಾರೆ. ಜಿಲ್ಲಾಮಟ್ಟದಲ್ಲಿ ಉತ್ತಮವಾಗಿ ಪ್ರಬಂಧ ಮಂಡಿಸುವ ಮೊದಲ 10 ತಂಡಗಳು ಡಿ.9 ರಿಂದ ಕಲ್ಬುರ್ಗಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 26 ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.