ಮಡಿಕೇರಿ, ನ.25 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಬಿರುನಾಣಿ ಮರೆನಾಡು ಕೊಡವ ಸಮಾಜದ ಸಹಯೋಗದಲ್ಲಿ ಮರೆನಾಡ್ ಕೋಲ್ ಕಾರ್ಯಕ್ರಮವು ತಾ. 27 ರಂದು (ನಾಳೆ) ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಕೊಡವ ಜಾನಪದ ಕಲಾವಿದ ಕಾಳಿಮಾಡ ಎಂ.ಮೋಟಯ್ಯ ಚಾಲನೆ ನೀಡಲಿದ್ದಾರೆ.

ನಂತರ ಮಧ್ಯಾಹ್ನ 2 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ, ಮರೆನಾಡು ಕೊಡವ ಸಮಾಜದ ಅಧ್ಯಕ್ಷ ಮಲ್ಲೇಂಗಡ ಎಂ.ಪೆಮ್ಮಯ್ಯ, ಬಾಳುಗೋಡು ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕಾಳಿಮಾಡ ಎ.ಮುತ್ತಣ್ಣ, ಗ್ರಾ.ಪಂ.ಅಧ್ಯಕ್ಷ ಬುಟ್ಟಿಯಂಡ ತಂಬಿ ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.