ಕುಶಾಲನಗರ, ನ. 25: ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾಲಿನ್ಯ ನಿಯಂತ್ರಣ ಬಗ್ಗೆ ಪರಿಸರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕುಶಾಲನಗರ ಕಾರು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲಕರಿಗೆ ಪರಿಸರ ಪೂರಕವಾದ ಗಿಡಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಿತರಿಸಿದರು.

ಚಾಲಕರು ತಾವು ಬಳಸುವ ವಾಹನಗಳನ್ನು ಸುಸ್ಥಿತಿಯಲ್ಲಿ ಇಡುವ ಮೂಲಕ ಮಾಲಿನ್ಯವನ್ನು ನಿಯಂತ್ರಿಸಲು ಸಹಕರಿಸುವಂತೆ ಇಲಾಖಾ ಅಧಿಕಾರಿ ಯೋಗೇಶ್ ಮನವಿ ಮಾಡಿದರು. ಈ ಸಂದರ್ಭ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನವೀನ್‍ಗೌಡ, ಆಟೋ ಚಾಲಕರು ಮಾಲೀಕರ ಸಂಘದ ಅಧ್ಯಕ್ಷ ವಿ.ಪಿ. ನಾಗೇಶ್ ಮತ್ತಿತರರು ಇದ್ದರು.