ಮಡಿಕೇರಿ, ನ. 25: ಗೌಡಳ್ಳಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡಲಾಯಿತು. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಬಿ. ಭರತ್ ಕುಮಾರ್, ಕಾರ್ಯದರ್ಶಿಗಳಾದ ವಿ.ಎನ್. ನಾಗರಾಜು, ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಮುಖ್ಯೋಪಾಧ್ಯಾಯ ಎನ್.ಕೆ. ನಾಗೇಂದ್ರ ಹಾಗೂ ಸಹ ಶಿಕ್ಷಕರು, ಪೋಷಕರು ಉಪಸ್ಥಿತರಿದ್ಧರು.