ಒಡೆಯನಪುರ, ನ. 25: 2017-18ನೇ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಿ.ಎಸ್. ಸತೀಶ್ ಅವರನ್ನು ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಸ್ಥಳೀಯ ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಗೋಪಾಲಪುರ ಗ್ರಾಮದ ಹಿರಿಯ ನಿವೃತ್ತ ಶಿಕ್ಷಕ ಸಿ.ಎಲ್. ಸುಬ್ಬಯ್ಯ ಹಾಗೂ ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಅಧ್ಯಕ್ಷೆ ಡಿ. ಸುಜಲಾದೇವಿ, ಶಿಕ್ಷಕ ಸಿ.ಎಸ್. ಸತೀಶ್ ದಂಪತಿಯನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಜಾನಪದ ಪರಿಷತ್ ಘಟಕದ ಉಪಾಧ್ಯಕ್ಷ ದಿನೇಶ್ ಮಾಲಂಬಿ, ಘಟಕದ ಸಂಚಾಲಕ ವಿ.ಸಿ. ಸುರೇಶ್ ಒಡೆಯನಪುರ, ವಿದ್ಯಾಸಂಸ್ಥೆಯ ಶಿಕ್ಷಕರು ಹಾಜರಿದ್ದರು.