ಕೂಡಿಗೆ, ನ. 25: ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.

ಶಿಬಿರವನ್ನು ಉದ್ಘಾಟಿಸಿದ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಎಸ್. ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಲು ಎನ್.ಎಸ್.ಎಸ್. ಶಿಬಿರ ಸಹಕಾರಿಯಾಗಿದೆ. ಆದ್ದರಿಂದ ಸೇವಾ ಮನೋಭಾವ ಬೆಳೆಸಿಕೊಳ್ಳುವದು ಮುಖ್ಯ ಎಂದರು.

ಕಾಲೇಜಿನ ಹಿರಿಯ ಉಪನ್ಯಾಸಕಿ ಕೆ.ಕೆ. ಭವಾನಿ ಶಿಬಿರದ ರೂಪುರೇಷೆಗಳ ಕುರಿತು ಮಾಹಿತಿಯಿತ್ತರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಮಾತನಾಡಿ, ವಿಶೇಷ ಎನ್.ಎಸ್.ಎಸ್ ಶಿಬಿರ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ರೂಪಿಸಿಕೊಳ್ಳಲು ಸಮಾಜದ ಸಮಸ್ಯೆಗಳನ್ನು ಅರಿಯಲು ಅದಕ್ಕೆ ಪರಿಹಾರ ಕಂಡುಕೊಳ್ಳಲು ಸ್ಥೈರ್ಯ ತುಂಬುತ್ತದೆ ಎಂದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎನ್.ಬಿ. ಮಹೇಶ್, ದೇವತಾ ಸಮಿತಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ದೇವತಾ ಸಮಿತಿಯ ಕಾರ್ಯದರ್ಶಿ ಸಿ.ಎನ್. ಲೋಕೇಶ್, ಶಿರಂಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಮುಖ್ಯ ಶಿಕ್ಷಕ ಸೋಮಯ್ಯ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಸುರೇಶ್, ಎಸ್.ಡಿ.ಎಂ.ಸಿ. ಸದಸ್ಯರಾದ ಕೃಷ್ಣ ಇದ್ದರು. ಶಿಬಿರಾಧಿಕಾರಿಗಳಾದ ಹೇಮಲತಾ, ಗಣೇಶ್, ಉಪನ್ಯಾಸಕಿ ಕಾವ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.