ಮಡಿಕೇರಿ, ಡಿ. 6: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2018-19ನೇ ಸಾಲಿನಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ರೂ.25 ಸಾವಿರಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್‍ನಲ್ಲಿ ಅರ್ಜಿ ಆಹ್ವಾನಿಸಿ, ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನ ಎಂದು ನಿಗಧಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸಲು ತಾ. 15 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ ಮಡಿಕೇರಿ ಕಚೇರಿ. ದೂ.ಸಂ. 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಅವರು ತಿಳಿಸಿದ್ದಾರೆ.