ಪೆರಾಜೆ, ಡಿ. 6: ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಪೆರಾಜೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕ ಕುಂದುಕೊರತೆ ಆಲಿಸಿ, ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.
ಪೆರಾಜೆಯ ಶ್ರೀ ಶಾಸ್ತಾವು ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಅಮಚೂರು ವ್ಯಾಪಾರೆ ಅಡ್ಕ ರಸ್ತೆ ವೀಕ್ಷಣೆ, ಬಂಗಾರಕೋಡಿ ಚಂದ್ರಶೇಖರ ಅವರ ಮನೆಯಲ್ಲಿ ಕಾರ್ಯಕರ್ತರ ಸಭೆ, ಬಂಗಾರಕೋಡಿ ಐನ್‍ಮನೆ ವಠಾರದಲ್ಲಿ ಸಭೆ, ಪೆರಾಜೆ ಕೃಷಿ ಪತ್ತಿನ ಸಹಕಾರಿ ಭವನದಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು.
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಗೊಳಿಸಿದರು. ನಂತರ ಪೆರಾಜೆಯ ಇಂದಿರಾ ಆವಾಜ್ ಕಾಲೋನಿ ಬಳಿ ಇರುವ ಶುದ್ಧ ನೀರಿನ ಘಟಕ ಉದ್ಘಾಟಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯರು, ಕೊಡಗು ಡಿಸಿಸಿ ಬ್ಯಾಂಕ್‍ನ ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಅಧ್ಯಕ್ಷ, ಸದಸ್ಯರು, ಎಲ್ಲಾ ಚುನಾಯಿತ ಸದಸ್ಯರು, ನಿರ್ದೇಶಕರು, ಬಿಜೆಪಿಯ ಜಿಲ್ಲಾ ಮತ್ತು ತಾಲೂಕು ಮಟ್ಟದ ನಾಯಕರು, ಗ್ರಾಮಸ್ಥರು ಭಾಗವಹಿಸಿದ್ದರು.