ಸೋಮವಾರಪೇಟೆ, ಡಿ. 6: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಮೈಸೂರಿನ ಪುರಭವನದಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಇಲ್ಲಿನ ಅಶ್ವಿನಿ ಕೃಷ್ಣಕಾಂತ್ ಅವರಿಗೆ ಸಮಾಜ ಸೇವೆಯ ಸಾಧನೆಗಾಗಿ ಕನ್ನಡ ವಿಕಾಸ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಅಧ್ಯಕ್ಷೆ ಯಮುನಾ, ಕೃಷಿ ವಿಜ್ಞಾನಿ ಡಾ. ವಸಂತಕುಮಾರ್, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ. ರಾಮು ಮತ್ತಿತರರು ಉಪಸ್ಥಿತರಿದ್ದರು.