ಕೂಡಿಗೆ, ಡಿ. 6: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಮಹಿಳಾ ಗ್ರಾಮ ಸಭೆ ಗ್ರಾ.ಪಂ. ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಮಹಿಳಾ ಸಮಸ್ಯೆಗಳ ಬಗ್ಗೆ ಹಾಗೂ ಸ್ವಸಹಾಯ ಗುಂಪುಗಳ ನಿರ್ವಹಣಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ಹಾಗೂ ಬ್ಯಾಂಕ್‍ಗಳಲ್ಲಿ ವ್ಯವಹರಿಸುವ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಹಿಷಾ ಮಾತನಾಡಿ, ಇಂತಹ ಗ್ರಾಮ ಸಭೆಗಳು ನಡೆಯುವದರಿಂದ ಮಹಿಳೆಯರು ಸಂಘಟನಾ ಅನುಭವ, ಆಡಳಿತಾತ್ಮಕ ಹಾಗೂ ಕಾನೂನಿನ ಅರಿವುಗಳು ತಿಳಿಯುತ್ತದೆ.

ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು, ತಮ್ಮ ಅರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ಬೇಕಾದ ಮಾಹಿತಿಯನ್ನು ನೀಡಿದ್ದರು. ಸಭೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಮಗ್ರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.