ಸೋಮವಾರಪೇಟೆ,ಡಿ.7: ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸರ್ವ ಶಿಕ್ಷಣ ಅಭಿಯಾನ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ತಾ. 11ರಂದು ಪೂರ್ವಾಹ್ನ 9.30 ಗಂಟೆಗೆ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇಲ್ಲಿನ ಸ.ಮಾ.ಪ್ರಾ. ಶಾಲಾ ಮೈದಾನದಲ್ಲಿ, ವಿಕಲಚೇತನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಆಯೋಜಿಸಲಾಗಿದೆ.
ತಾಲೂಕಿನಲ್ಲಿ 5 ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.