ಮಡಿಕೇರಿ, ಡಿ. 8: ಅಷ್ಟಮಂಗಲ ಪರಿಹಾರ ಕಾರ್ಯಕ್ರಮದ ಪ್ರಯುಕ್ತ ತಾ. 10 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ತಲಕಾವೇರಿ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಏರ್ಪಡಿಸಲಾಗಿದೆ. ರೋಹಿಣಿ, ಹಸ್ತಾ, ಶ್ರವಣ, ಪುನರ್ವಸು, ವಿಶಾಖ, ಪೂರ್ವಭಾದ್ರ ನಕ್ಷತ್ರದವರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಪ್ರಕಟಣೆ ಕೋರಿದೆ.