ಮಡಿಕೇರಿ, ಡಿ. 7: ಮಡಿಕೇರಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ 2018-19ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ತಾ.8 ರಂದು (ಇಂದು) ಬೆಳಗ್ಗೆ 9.30 ಗಂಟೆಗೆ ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಕೆಂಚಪ್ಪ, ಮಡಿಕೇರಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ, ಬೆಂಗಳೂರು ಸಂಸದೀಯ ವ್ಯವಹಾರಗಳ ಇಲಾಖೆಯ ಶಾಖಾಧಿಕಾರಿ ಬಿ.ವಿ.ಗೀತಾಬಾಯಿ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್ ವಿಜಯ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಗಳ ಸಮಾರೋಪ ಸಮಾರಂಭವು ಡಿಸೆಂಬರ್ 08 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ನಡೆಯಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಕೆಂಚಪ್ಪ, ಮಡಿಕೇರಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ, ಬೆಂಗಳೂರು ಸಂಸದೀಯ ವ್ಯವಹಾರಗಳ ಇಲಾಖೆಯ ಶಾಖಾಧಿಕಾರಿ ಬಿ.ವಿ.ಗೀತಾಬಾಯಿ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.